Kannada Janapada Hadugalu

Kannada Janapada Hadugalu

@kannadajanapada_kvp

2 subscribers4 videos18 views

ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ. ಇಂದಿನ ಪಾಶ್ಚಾತ್ಯ ಶೈಲಿಯ ಸಂಗೀತದ ಮಧ್ಯೆ ಜಾನಪದ ಗೀತೆಗಳು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಬದ್ರವಾಗಿ ಊಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ. ಇವು ಹಳ್ಳಿಯು ಸಾಮಾನ್ಯ ಜನರ ನಡುವೆ ಹುಟ್ಟಿ ಬಾಯಿಂದ ಬಾಯಿಗೆ ಹರಿದು ಬಂದಿರುವ ಸಿರಿನುಡಿ ಎನ್ನಬಹುದು. ಹೂಮಾಲೆಯಂಥ ಸಾಲುಗಳನ್ನು ಯಾರು ಯಾವಾಗ ಬರೆದರೋ ಗೊತ್ತಿಲ್ಲ,ಇವು ನೂರಾರು ವರ್ಷಗಳಿಂದ ಸಾವಿರಾರು ಜನಗಳ ಬಾಯಿಂದ ಹರಿದು ಬಂದ ನುಡಿಗಳು,ನಮ್ಮ ಹಳ್ಳಿಗಳಲ್ಲಿ ಕಲೋಪಾಸಕತ್ವವನ್ನು,ಸೃಜನಶೀಲತೆಯನ್ನು, ಮತ್ತು ಮಾಧುರ್ಯವನ್ನು ಹಳ್ಳಿಗರಿಗೆ ತಿಳಿಯದಂತೆ ಅವರ ಜೀವನ ವಿಧಾನವನ್ನಾಗಿ ಪರಿವರ್ತಿಸಿದ ಸಂಸ್ಕೃತಿಯೊಂದರ ಹೆಜ್ಜೆಗುರುತುಗಳು.

Kannada Janapada Hadugalu YouTube Banner

Format

Type

/api/banner/UCKWnNPx8z1p7MR5UQxKDUyw?format=webp
Download WEBP

Channel Info

Country
IN
Joined
Jul 17, 2023
Keywords
@janapada@kannada"@kannadajanapada""@kannadajanapadahadugalu""@kannadahadugalu""@janapada

Download Kannada Janapada Hadugalu's YouTube Banner

Use banner.yt to download Kannada Janapada Hadugalu's YouTube banner, channel art, and profile picture in any format. Our API supports WebP (recommended for best compression), AVIF, JPEG, and PNG formats. Choose from preset sizes optimized for desktop, TV, tablet, and mobile, or specify custom dimensions.

Simply use the URL /api/banner/UCKWnNPx8z1p7MR5UQxKDUyw to embed this banner anywhere — in websites, apps, Discord bots, or OBS overlays. No API key required.